ಬಂಧನ
(ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಐವರನ್ನು ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾದ ಪ್ರಾಮೆಸೆ, ಪ್ಯಾಟ್ರಿಕ್, ದಂತ ವೈದ್ಯಕೀಯ ವಿದ್ಯಾರ್ಥಿ ಕಲ್ಯಾಣ್, ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಬಿಲಾಲ್ ಮತ್ತು ಸೈಯದ್ ಜಾಬೀರ್ ಬಂಧಿತರು. ಆರೋಪಿಗಳಿಂದ 19 ಗ್ರಾಂ ಮಾದಕವಸ್ತು ವಶಕ್ಕೆ ಪಡೆಯಲಾಗಿದೆ.
ಮಾದಕವಸ್ತು ಜಾಲದಲ್ಲಿ ಸಿಲುಕಿದ ಕಲ್ಯಾಣ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಲ್ಯಾಣ್ ನೀಡಿದ ಸುಳಿವು ಆಧರಿಸಿ ಬಾಡಾ ಕ್ರಾಸ್ ಬಳಿ ಮಾದಕವಸ್ತು ಖರೀದಿ ನೆಪದಲ್ಲಿ ಆರೋಪಗಳನ್ನು ಸಂಪರ್ಕಿಸಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.