ದಾವಣಗೆರೆ: ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಎಲೆ ಬೇತೂರು ಗ್ರಾಮದ ಗುರುಸಿದ್ದಯ್ಯ (80) ಹಾಗೂ ಸರೋಜಮ್ಮ (75) ಕೊಲೆಯಾದ ದಂಪತಿ.
ಮೂರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದ ದಂಪತಿ, ಮನೆಯಲ್ಲಿ ಇಬ್ಬರೇ ವಾಸ ಮಾಡುತ್ತಿದ್ದರು.
ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪಕ್ಕದ ಮನೆಯವರು ಬೆಳಿಗ್ಗೆ ಸರೋಜಮ್ಮ ಅವರನ್ನು ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದು ಪರಿಶೀಲಿಸಿದರು.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.