
ಪ್ರಜಾವಾಣಿ ವಾರ್ತೆ
ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ದಾವಣಗೆರೆ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಮಧ್ಯ ರಾತ್ರಿ ಗುಡುಗು, ಮಿಂಚು ಸಹಿತ ಮಳೆ ಧಾರಾಕಾರ ಮಳೆ ಸುರಿದಿದೆ.
ಸಂತೇಬೆನ್ನೂರು ಸಮೀಪದ ದೊಡ್ಡಬ್ಬಿಗೆರೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ನಾಲ್ಕು ಕಂಬಗಳು ಮುರಿದು ಬಿದ್ದಿವೆ. ಗ್ರಾಮಸ್ಥರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ವಿದ್ಯುತ್ ನಿಲುಗಡೆ ಮಾಡಿಸಿದ್ದರಿಂದ ಅವಘಡ ತಪ್ಪಿದೆ.
ಸಂತೇಬೆನ್ನೂರಿನಿಂದ ಸಾಸಲು ರಸ್ತೆಯಲ್ಲಿ ಚರಂಡಿ ಕಾಮಗಾರಿ ಅಪೂರ್ಣವಾಗಿದ್ದರಿಂದ ರಸ್ತೆಗೆ ನೀರು ನುಗ್ಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.