ADVERTISEMENT

ದಾವಣಗೆರೆ: ಕಾಡಾನೆ ಸೆರೆಯ ವೇಳೆ ವೈದ್ಯಾಧಿಕಾರಿ ಮೇಲೆ ಆನೆ ದಾಳಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2023, 6:05 IST
Last Updated 11 ಏಪ್ರಿಲ್ 2023, 6:05 IST
ನ್ಯಾಮತಿ ತಾಲ್ಲೂಕು ಕೆಂಚಿಕೊಪ್ಪ ಗ್ರಾಮದ ಹನುಮಾಪುರ ಗಡಿ ಜಾಲಿ ಹೊಸೂರ್ ಕೆರೆಯಲ್ಲಿ ಕಾಡಾನೆ ವಿಹರಿಸುತ್ತಿರುವುದು
ನ್ಯಾಮತಿ ತಾಲ್ಲೂಕು ಕೆಂಚಿಕೊಪ್ಪ ಗ್ರಾಮದ ಹನುಮಾಪುರ ಗಡಿ ಜಾಲಿ ಹೊಸೂರ್ ಕೆರೆಯಲ್ಲಿ ಕಾಡಾನೆ ವಿಹರಿಸುತ್ತಿರುವುದು   

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಕೆಂಚಿಕೊಪ್ಪದ ಬಳಿ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆ ಸಕ್ರೆಬೈಲು ಆನೆ ಕ್ಯಾಂಪಿನ ವೈದ್ಯಾಧಿಕಾರಿ ಡಾ. ವಿನಯ್ ಅವರ ಮೇಲೆ ಆನೆ ದಾಳಿ ಮಾಡಿದೆ.

ಎರಡು ದಿನಗಳ ಹಿಂದೆ ಚನ್ನಗಿರಿ ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿ ವಿದ್ಯಾರ್ಥಿನಿ ಕವನಾ ಅವರ ಮೇಲೆ ದಾಳಿ ಮಾಡಿ ಸಾಯಿಸಿದ್ದ ಕಾಡಾನೆ ಸೆರೆಗೆ ಎರಡು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು.

ಮಂಗಳವಾರ ಬೆಳಿಗ್ಗೆ ಆನೆ ಸೆರೆ ಹಿಡಿಯುವ ವೇಳೆ ಗನ್‌ನಿಂದ ಅರವಳಿಕೆ ಚುಚ್ಚುಮದ್ದು ನೀಡಲು ಹೋದಾಗ ಆ ಶಬ್ದದ ಜಾಡು ಹಿಡಿದು ಬಂದು ಡಾ.ವಿನಯ್ ಅವರ ಮೇಲೆ ದಾಳಿ ಮಾಡಿದೆ. ಗಾಯಗೊಂಡ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಆನೆ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋಣ್ ತಂಡ, ಮಾವುತರು, ಪಶು ವೈದ್ಯಾಧಿಕಾರಿಗಳ ತಂಡದೊಡನೆ ಕಾರ್ಯಾಚರಣೆ ಆರಂಭಿಸಿದ್ದರು. ಸೋಮವಾರ ಬಸವಾಪಟ್ಟಣದ ಶೃಂಗಾರ ಭಾಗ್ ಬಳಿ ಇರುವ ಸಂಶಯ ವ್ಯಕ್ತವಾಗಿತ್ತು. ಆದರೆ ಮಂಗಳವಾರ ನ್ಯಾಮತಿಯ ಕೆಂಚಿಕೊಪ್ಪ ಸಮೀಪದ ಹನುಮಾಪುರ ಗಡಿ ಭಾಗ ಜಾಲಿ ಹೊಸೂರು ಹತ್ತಿರ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.