ಹೊನ್ನಾಳಿ: ಪೌರ ನೌಕರರ ಪ್ರಮುಖವಾದ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರಿಂದ ಮುಷ್ಕರವನ್ನು ಕೈಬಿಡುತ್ತಿರುವುದಾಗಿ ಪೌರ ಕಾರ್ಮಿಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೆ. ನಾಗರಾಜಪ್ಪ ಹೇಳಿದರು.
ಶನಿವಾರ ಪುರಸಭೆ ಆವರಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸಂಘದ ರಾಜ್ಯ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಮುಷ್ಕರ ಕೈಬಿಟ್ಟಿದ್ದೇವೆ ಎಂದರು.
ಐದು ದಿನಗಳಿಂದ ಸ್ಥಗಿತಗೊಳಿಸಿದ್ದ ಕಚೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ ನಿರ್ವಹಣೆ ಕಾರ್ಯಗಳಿಗೆ ಇಂದಿನಿಂದಲೇ ಚಾಲನೆ ನೀಡಲಿದ್ದೇವೆ ಎಂದರು. ಉಪಾಧ್ಯಕ್ಷ ಓಬಳೇಶ್, ಪ್ರಜಾಪರಿವರ್ತನಾ ವೇದಿಕೆಯ ಸಂಚಾಲಕ ಎ.ಡಿ. ಈಶ್ವರಪ್ಪ, ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.