ADVERTISEMENT

ವಾಯುಮಾಲಿನ್ಯ ನಿಯಂತ್ರಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಮೇ 2025, 15:36 IST
Last Updated 15 ಮೇ 2025, 15:36 IST
ದಾವಣಗೆರೆಯ ಅರಣ್ಯ ಇಲಾಖೆಯ ನರ್ಸರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ದಾವಣಗೆರೆಯ ಅರಣ್ಯ ಇಲಾಖೆಯ ನರ್ಸರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ದಾವಣಗೆರೆ: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ದೂರುಗಳಿವೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಾಯು ಗುಣಮಟ್ಟವನ್ನು ನಿತ್ಯ ಪರಿಶೀಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಇಲ್ಲಿನ ಅರಣ್ಯ ಭವನದಲ್ಲಿ ಗುರುವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಹೆಚ್ಚು ಮಾಲಿನ್ಯ ಇರುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

‘ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೊಟ್ಯಾಗ್ ಮಾಡಬೇಕು. ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ತಾಕೀತು ಮಾಡಿದರು.

ADVERTISEMENT

‘ಹವಾಮಾನ ಬದಲಾವಣೆಗೆ ಹಸಿರು ಹೊದಿಕೆಯ ಹೆಚ್ಚಳವೇ ಪರಿಹಾರವಾಗಿದೆ. ಮುಂಬರುವ ವನಮಹೋತ್ಸವದ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಟ್ಟು ಪೋಷಿಸಬೇಕು. ಕಂದಾಯ ಭೂಮಿಯನ್ನು ಅರಣ್ಯ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಇದಕ್ಕೂ ಮುನ್ನ ಪರಿಸರ ಇಲಾಖೆಯ ವಾಯುಮಾಲಿನ್ಯ ನಿಗಾ ಮತ್ತು ಪರೀಕ್ಷಾ ಪ್ರಯೋಗಾಲಯ, ತ್ಯಾಜ್ಯ ಜಲ ಸಂಸ್ಕರಣಾ ಘಟಕ ಹಾಗೂ ನರ್ಸರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.