ADVERTISEMENT

ಮಧ್ಯ ಕರ್ನಾಟಕದಲ್ಲಿ 500 ಇ–ಹುಂಡಿ ಸ್ಥಾಪನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದ ಕಿಶೋರ್

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 1:45 IST
Last Updated 20 ಸೆಪ್ಟೆಂಬರ್ 2022, 1:45 IST
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 108 ಇ-ಹುಂಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಹಳೇಪೇಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದ ಕಿಶೋರ್ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಸಂದೀಪ್ ಭಟ್ನಾಗರ್, ಉಪ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ನಾಯರ್ ಇದ್ದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 108 ಇ-ಹುಂಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಹಳೇಪೇಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದ ಕಿಶೋರ್ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಸಂದೀಪ್ ಭಟ್ನಾಗರ್, ಉಪ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ನಾಯರ್ ಇದ್ದರು.   

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಮಧ್ಯ ಕರ್ನಾಟಕದಲ್ಲಿ 500 ಇ–ಹುಂಡಿಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದ ಕಿಶೋರ್ ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 108 ಇ-ಹುಂಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಹಳೇಪೇಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ನೆರವೇರಿಸಿ ಅವರು ಮಾತನಾಡಿದರು.

‘ಮಧ್ಯ ಕರ್ನಾಟಕ ಭಾಗಗಳಲ್ಲಿ 300 ಇ-ಹುಂಡಿಗಳನ್ನು ಸ್ಥಾಪಿಸಲಾಗಿದ್ದು, ಈ ಸಂಖ್ಯೆಯನ್ನುಇನ್ನಷ್ಟುಹೆಚ್ಚಿಸಲಾಗುವುದು. ಸಂಪ್ರದಾಯದಂತೆ ಹುಂಡಿಗಳಲ್ಲಿ ಭಕ್ತರು ಹಾಕಿದ ಹಣವನ್ನು ಎಣಿಕೆ ಮಾಡಿ, ಬ್ಯಾಂಕಿನಲ್ಲಿ ಠೇವಣಿ ಮಾಡುವ ಪದ್ಧತಿಯಿದೆ. ಇ-ಹುಂಡಿ ಸ್ಥಾಪನೆ ಮಾಡಿರುವ ಕಡೆಗಳಲ್ಲಿ ಭಕ್ತರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಹಣದ ಮೊತ್ತವನ್ನು ನಮೂದಿಸಿದರೆ ನೇರವಾಗಿ ದೇವಸ್ಥಾನದ ಟ್ರಸ್ಟ್‌ಗೆ ಹೋಗುವ ವ್ಯವಸ್ಥೆ ಇದೆ’ ಎಂದರು.

ADVERTISEMENT

‘ಕೇಂದ್ರ ಸರ್ಕಾರದ ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವೂ ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೆಜ್ಜೆ ಹಾಕುತ್ತಿದೆ. ದೇವಸ್ಥಾನ ಇನ್ನಿತರ ಧಾರ್ಮಿಕ ಸ್ಥಳಗಳಲ್ಲಿ ಇ-ಹುಂಡಿ ಸ್ಥಾಪಿಸುವುದರಿಂದ ಬಹಳಷ್ಟು ಅನುಕೂಲಗಳಿವೆ. ಹಣದ ವರ್ಗಾವಣೆ ವೇಗವಾಗಿ ನಡೆಯುತ್ತದೆ’ ಎಂದು ತಿಳಿಸಿದರು.

‘ಭಕ್ತರು ನೀಡಿದ ತಕ್ಷಣ ಖಾತೆಗೆ ಜಮಾ ಆಗುವುದರಿಂದ ಟ್ರಸ್ಟ್‌ನವರು ದೇವಸ್ಥಾನಕ್ಕೆ ಅಗತ್ಯವಾದ ಹೂವು, ಊದುಬತ್ತಿ ಇನ್ನಿತರ ಪದಾರ್ಥಗಳನ್ನು ಖರೀದಿಸಲು, ವ್ಯಾಪಾರಸ್ಥರಿಗೆ ಹಣ ಪಾವತಿಸಲು ಅನುಕೂಲವಾಗುತ್ತದೆ’ ಎಂದು ಹೇಳಿದರು.

‘ದೇವಸ್ಥಾನಗಳು ಮಾತ್ರವಲ್ಲದೆ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಇ-ಹುಂಡಿ ಸ್ಥಾಪಿಸಲಾಗಿದೆ. ಭಕ್ತರು ಈ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬೇಕು’ ಎಂದು ಬ್ಯಾಂಕಿನ ಮಂಡಿಪೇಟೆ ಶಾಖೆಯ ಮುಖ್ಯ ಪ್ರಬಂಧಕ ಸುರೇಶ್ ಮನವಿ ಮಾಡಿದರು.

ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಸಂದೀಪ್ ಭಟ್ನಾಗರ್, ಉಪ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ನಾಯರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಅನಿಲ್ ಬಿಹಾರಿ ಇದ್ದರು. ಸುಜಯಾ ನಾಯಕ್ ಪ್ರಾರ್ಥಿಸಿದರು.

ದಂಡ ವಿಧಿಸಲು ಕ್ಯೂಆರ್ ಕೋಡ್!

ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ವಿಧಿಸುವಾಗ ಕ್ಯೂಆರ್ ಕೋಡ್ ಸ್ಕಾೃನ್ ಮಾಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿದರು.

‘ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ನಮ್ಮ ಟ್ರಾಫಿಕ್ ಸಿಬ್ಬಂದಿಗೆ ಕ್ಯೂಆರ್ ಕೋಡ್ ನೀಡಲಾಗುತ್ತಿದ್ದು, ವಾಹನ ಸವಾರರು ದಂಡ ಪಾವತಿಸುವಾಗ ಅದನ್ನು ಸ್ಕ್ಯಾನ್ ಮಾಡಬೇಕು. ಹಣ ಪಾವತಿಸಿದ್ದಕ್ಕೆ ಅವರಿಗೆ ಮೆಸೇಜ್ ಬರುತ್ತದೆ ಎಂದು ತಿಳಿಸಿದರು.

‘ಇ-ಹುಂಡಿ ಸ್ಥಾಪನೆಯಿಂದ ದೇವಸ್ಥಾನಗಳ ಹುಂಡಿ ಕಳ್ಳತನ ಪ್ರಕರಣಗಳು ಇರುವುದಿಲ್ಲ. ಭಕ್ತರು ನೀಡಿದ ಹಣ ಸುರಕ್ಷಿತವಾಗಿರುತ್ತದೆ’ ಎಂದರು.

‘ದೇಶದಲ್ಲಿ ಇತ್ತೀಚೆಗೆ ಡಿಜಿಟಲ್ ವೇದಿಕೆಗಳು ಯಶಸ್ವಿಯಾಗುತ್ತಿವೆ. ಅಮೆಜಾನ್, ಫ್ಲಿಪ್‌ಕಾರ್ಟ್‌ನಂಥ ಕಂಪನಿಗಳ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.