
ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಡಿ.15ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ದಾವಣಗೆರೆ ವಿಶ್ವವಿದ್ಯಾಲಯ ಮುಂದೂಡಿದೆ.
‘ಶಿವಶಂಕರಪ್ಪ ಅವರು ನಿಧನರಾಗಿರುವುದರಿಂದ ಸೋಮವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿಶ್ವವಿದ್ಯಾಲಯದ ಶಿವಗಂಗೋತ್ರಿ ಹಾಗೂ ಚಿತ್ರದುರ್ಗದ ಜಿ.ಆರ್. ಹಳ್ಳಿಯ ಸ್ನಾತಕೋತ್ತರ ಕೇಂದ್ರ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಘಟಕ ಕಾಲೇಜುಗಳಿಗೆ ಡಿ.15 ರಂದು ರಜೆ ಘೋಷಿಸಲಾಗಿದೆ’ ಎಂದು ಕುಲಸಚಿವ ಎಸ್.ಎ. ಘಂಟಿ ಹಾಗೂ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.