ADVERTISEMENT

ನಕಲಿ ಬಂಗಾರದ ಬಿಲ್ಲೆ ನೀಡಿ ವಂಚನೆ; ಬಂಧನ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:57 IST
Last Updated 14 ಡಿಸೆಂಬರ್ 2025, 6:57 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ದಾವಣಗೆರೆ: ಕಡಿಮೆ ದರಕ್ಕೆ ಬಂಗಾರದ ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆ ನೀಡಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ADVERTISEMENT

ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ಪರಶುರಾಮ ಹಾಗೂ ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ ಗ್ರಾಮದ ಮನೋಜ್ ಬಂಧಿತರು. ಆರೋಪಿಗಳಿಂದ ₹5.90 ಲಕ್ಷ ನಗದು, ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ವಾಹನವನ್ನು ಜಪ್ತಿ ಮಾಡಲಾಗಿದೆ. 

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕುಂದೂರು ಗ್ರಾಮದ ಮೂರ್ತಿ ಕೆ.ವಿ. ಅವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು ಕಡಿಮೆ ದರಕ್ಕೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲು ಪರೀಕ್ಷೆ ನಡೆಸಲು ಅಸಲಿ ನಾಣ್ಯ ನೀಡಿದ್ದ ಆರೋಪಿಗಳು, ಖರೀದಿ ವೇಳೆ ನಕಲಿ ನಾಣ್ಯಗಳನ್ನು ನೀಡಿ ₹6 ಲಕ್ಷ ಹಣ ಪಡೆದು ವಂಚಿಸಿದ್ದರು. 

ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರಶುರಾಮ ಈ ಹಿಂದೆ ಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.