ADVERTISEMENT

ಕೌಟುಂಬಿಕ ಕಲಹ: ಇಬ್ಬರು ಮಕ್ಕಳೊಂದಿಗೆ ಶಿಕ್ಷಕಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 2:56 IST
Last Updated 13 ಅಕ್ಟೋಬರ್ 2020, 2:56 IST

ದಾವಣಗೆರೆ: ಕೌಟುಂಬಿಕ ಕಲಹದ ಕಾರಣದಿಂದ ಶಿಕ್ಷಕಿಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಜಯನಗರದ ನಿವಾಸಿಶ್ರೀದೇವಿ (38), ಮಕ್ಕಳಾದ ಹಂಸಿಕಾ (12) ಹಾಗೂ ನೂತನಾ (9) ಮೃತಪಟ್ಟವರು.

ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ‌ನಗರದ ಹೊರವಲಯದ ಎಚ್. ಕಲ್ಪನಹಳ್ಳಿಯ ಕಾಲುವೆ ಬಳಿಗೆಸ್ಕೂಟಿಯಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ವೇಲ್‌ನಿಂದ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ.

ADVERTISEMENT

ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.