ದಾವಣಗೆರೆ: ಸಾಲದ ಹೊರೆಯಿಂದಾಗಿ ಮನನೊಂದು ವಿಷ ಸೇವಿಸಿದ್ದ ತಾಲ್ಲೂಕಿನ ಕುರುಡಿ ಗ್ರಾಮದ ರೈತ ಬಸವರಾಜಪ್ಪ (40) ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.
‘ಬೆಳೆ ಬೆಳೆಯುವುದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್, ಸಹಕಾರ ಬ್ಯಾಂಕ್‌ಗಳಲ್ಲಿ ಹಾಗೂ ಖಾಸಗಿಯಾಗಿ ಸುಮಾರು ₹ 6 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಖಿನ್ನತೆಗೆ ಒಳಗಾಗಿದ್ದ ಬಸವರಾಜಪ್ಪ ಎರಡು ದಿನಗಳ ಹಿಂದೆ ವಿಷ ಕುಡಿದಿದ್ದರು’ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.