ADVERTISEMENT

33 ಕೇಂದ್ರಗಳಲ್ಲಿ ಎಫ್‌ಡಿಎ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 4:36 IST
Last Updated 1 ಮಾರ್ಚ್ 2021, 4:36 IST
ದಾವಣಗೆರೆಯ ಮೋತಿ ವೀರಪ್ಪ ಕಾಲೇಜಿನಲ್ಲಿ ನಡೆದ ಎಫ್‌ಡಿಎ ಪರಿಕ್ಷೆಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪರಿಶೀಲಿಸಿದರು.
ದಾವಣಗೆರೆಯ ಮೋತಿ ವೀರಪ್ಪ ಕಾಲೇಜಿನಲ್ಲಿ ನಡೆದ ಎಫ್‌ಡಿಎ ಪರಿಕ್ಷೆಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪರಿಶೀಲಿಸಿದರು.   

ದಾವಣಗೆರೆ: ನಗರದ 33 ಕೇಂದ್ರಗಳಲ್ಲಿ ಕೆಪಿಎಸ್‌ಸಿ ನಡೆಸಿದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆಯಿತು.

ಕಳೆದ ತಿಂಗಳು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಮತ್ತೊಮ್ಮೆ ಅಕ್ರಮ ಉಂಟಾಗಬಾರದರು ಎಂಬ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪ್ರಶ್ನೆ ಪತ್ರಿಕೆ
ಗಳಿಗೆ ಅಭ್ಯರ್ಥಿಗಳು ಪರೀಕ್ಷೆ ಬರೆದರು.

ನಗರದ ದೃಶ್ಯಕಲಾ ಮಹಾವಿದ್ಯಾಲಯದ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮೂರು ತಿಂಗಳ ಹಸುಗೂಸಿನೊಂದಿಗೆ ಬಂದಿದ್ದತೋಳ ಹುಣಸೆಯ ಯಲ್ಲಮ್ಮನಗರದ ಶ್ವೇತಾ ಪರೀಕ್ಷೆ ಬರೆದರು. ತಮ್ಮೊಂದಿಗೆ ಕರೆ ತಂದಿದ್ದ ಸಂಬಂಧಿಕ ಮಹಿಳೆಯೊಬ್ಬರ ಕೈಗೆ ಮಗುವನ್ನು ಕೊಟ್ಟು ಪರೀಕ್ಷೆ ಬರೆದರು.

ADVERTISEMENT

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ್ ನಗರದ ಮೋತಿ ವೀರಪ್ಪ, ಸರ್ಕಾರಿ ಪಿ.ಯು.ಕಾಲೇಜು ಮತ್ತು ಸಿದ್ದಗಂಗಾ ಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಿಗ್ಗೆ ನಡೆದ ಸಾಮಾನ್ಯ ಜ್ಞಾನದ ಪರೀಕ್ಷೆ 11,688 ಅಭ್ಯರ್ಥಿಗಳು ನೋಂದಣಿ ಮಾಡಿದ್ದರು. ಇದರಲ್ಲಿ 7,765 ಅಭ್ಯರ್ಥಿಗಳು ಪರೀಕ್ಷೆ ಬರೆದರೆ 3,923 ಅಭ್ಯರ್ಥಿಗಳು ಗೈರಾಗಿದ್ದರು. ಮಧ್ಯಾಹ್ನ ಬಳಿಕ ನಡೆದ ಜನರಲ್ ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಗೆ 7,812 ಅಭ್ಯರ್ಥಿಗಳು ಹಾಜರಾಗಿದ್ದು, 3,876 ಅಭ್ಯರ್ಥಿಗಳು ಗೈರಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.