ಬಸವಾಪಟ್ಟಣ: ನಿರಂತರ ಮಳೆಯಿಂದ ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪಕ್ಕದಲ್ಲಿರುವ ಗುಡ್ಡ ಕುಸಿಯುತ್ತಿದ್ದು, ಇದರೊಂದಿಗೆ ಗ್ರಾಮದ ನೀರು ಸರಬರಾಜಿಗಾಗಿ ನಿರ್ಮಿಸಲಾಗಿರುವ ಎರಡು ಟ್ಯಾಂಕ್‌ಗಳೂ ಸಹ ಕಾಲೇಜು ಕಟ್ಟಡದ ಮೇಲೆ ಕುಸಿಯುವ ಭೀತಿ ಎದುರಾಗಿದೆ ಎಂದು ಪ್ರಾಂಶುಪಾಲ ಟಿ.ಮಂಜಣ್ಣ ತಿಳಿಸಿದ್ದಾರೆ.
ಗುಡ್ಡ ಕುಸಿಯುತ್ತಿರುವ ಬಗ್ಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಎಸ್.ಬಸವಂತಪ್ಪ ಅವರ ಗಮನಕ್ಕೆ ತಂದಿದ್ದೇವೆ. ಭಾನುವಾರವೂ ಸಹ ಮಳೆ ಬಂದಿದ್ದು, ಗುಡ್ಡದಿಂದ ಮಣ್ಣು, ಕಲ್ಲುಗಳು ಕೆಳಗೆ ಬೀಳುತ್ತಿವೆ. ಒಂದು ವೇಳೆ ನೀರಿನ ಟ್ಯಾಂಕ್‌ಗಳು ಉರುಳಿದರೆ ಕಾಲೇಜು ಕಟ್ಟಡಕ್ಕೆ ತೀವ್ರ ಹಾನಿಯಾಗುವ ಸಂಭವವಿದೆ. ಕೂಡಲೇ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು ಎಂದು ಪ್ರಾಂಶುಪಾಲ ಮಂಜಣ್ಣ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.