ADVERTISEMENT

ಹೊನ್ನಾಳಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಗೊಬ್ಬರದ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 3:08 IST
Last Updated 24 ಜುಲೈ 2025, 3:08 IST
1ಇಪಿ : ಹೊನ್ನಾಳಿ ಪಟ್ಟಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತಾ ಯುವಕಾಂಗ್ರೆಸ್ ಘಟಕ ರಸಗೊಬ್ಬರದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. 
1ಇಪಿ : ಹೊನ್ನಾಳಿ ಪಟ್ಟಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತಾ ಯುವಕಾಂಗ್ರೆಸ್ ಘಟಕ ರಸಗೊಬ್ಬರದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.    

ಹೊನ್ನಾಳಿ: ‘ಅಚ್ಚೇದಿನ್‌ ಆಯೇಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾಪ್ರಹಾರ ಮಾಡುತ್ತಲೇ ಬಂದಿದೆ’ ಎಂದು ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಮನು ವಾಲಜ್ಜಿ ಹೇಳಿದರು.

ರಸಗೊಬ್ಬರದ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಬುಧವಾರ ಯುವ ಕಾಂಗ್ರೆಸ್‍ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಒಂದಾದ ನಂತರ ಒಂದು ವಸ್ತುವಿನ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ರೈತರ ಬೆಳೆಗಳಿಗೆ ಹಾಕುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ’ ಎಂದರು.

ADVERTISEMENT

‘ಕಳೆದ ವರ್ಷಕ್ಕಿಂತ ಎಲ್ಲ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರ ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ’ ಎಂದು ದೂರಿದರು.

‘ರಸಗೊಬ್ಬರಗಳ ಬೆಲೆ ಇಳಿಕೆ ಮಾಡದಿದ್ದಲ್ಲಿ ಯುವ ಕಾಂಗ್ರೆಸ್‍ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ಮಾಡಲಿದೆ’ ಎಂದು ಎಚ್ಚರಿಸಿದರು.

ಮಳೆಯ ಅನಿಶ್ಚಿತತೆ, ಅತಿವೃಷ್ಟಿ, ಅನಾವೃಷ್ಟಿಗಳಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆಹಾನಿ ಸೇರಿದಂತೆ ವಿವಿಧ ಕಾರಣಗಳಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಸಂಕಷ್ಟದಲ್ಲಿರುವ ರೈತರನ್ನು ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿಸಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಹೊನ್ನಾಳಿ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ವಿಜಯ್, ಸಾಸ್ವೆಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನ್, ತಾಲ್ಲೂಕು ಘಟಕದ ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಂಜು ಬಂತಿ, ಎನ್‍ಎಸ್‍ಯುಐ ಅಧ್ಯಕ್ಷ ಶಿವಕುಮಾರ್, ಪದಾಧಿಕಾರಿಗಳಾದ ಕರೀಂ, ಸಂತೋಷ್, ಬೀರೇಶ್, ಸಿದ್ದೇಶ್, ಗಣೇಶ್, ಅಜ್ಜಪ್ಪ, ಸುರೇಶ್, ವೀರೇಶ್, ನಿಖಿಲ್‍ಕುಮಾರ್, ಯೋಗಿ ಸೊರಟೂರು, ಲೋಹಿತ್, ಮಂಜು, ಸಾಗರ್ ಗಣೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.