ಮಲೇಬೆನ್ನೂರು: ಸಮೀಪದ ಹಿರೆಹಾಲಿವಾಣ ಗ್ರಾಮದಲ್ಲಿ ಡಿ. 26ರಂದು ಗೋಧೂಳಿ ಸಮಯದಲ್ಲಿ ಬೀರಲಿಂಗೇಶ್ವರ ಮರಿ ಬನ್ನಿ, ದೊಡ್ಡೆಡೆ ಜಾತ್ರೆ, ಕಾರ್ತಿಕ ದೀಪೋತ್ಸವ ಹಾಗೂ ಹೊಳೆಪೂಜೆ, ಪಾದ ಪೂಜೆ ದೇವತಾ ಆರಾಧನೆ ನಡೆಯಲಿದೆ. ಡಿ. 27ರಂದು ಧರ್ಮಸಭೆ, ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಯಾದವ ಗುರು ಪೀಠದ ಯಾದವಾನಂದ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣ ಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಹದಡಿ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ, ಬ್ರಹ್ಮ ಕುಮಾರಿ ಶಾಂತಕ್ಕ, ಮಠದ ಶೇಖರಯ್ಯ ಸ್ವಾಮೀಜಿ ಹಾಗೂ ಪೂಜಾರ ರೇವಣಸಿದ್ದೇಶ್ವರ ನೇತೃತ್ವದಲ್ಲಿ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ನಡೆಯಲಿದೆ.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎನ್.ಜಿ.ಬಸವರಾಜಪ್ಪ ಅದ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ಎಚ್.ಎಸ್.ಶಿವಶಂಕರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಸೇರಿ ಜನಪ್ರತಿನಿಧಿಗಳು ಪಾಲ್ಗೊಳ್ಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.