ಬಿಜೆಪಿ ಶಾಸಕ ಬಿ.ಪಿ. ಹರೀಶ್
ದಾವಣಗೆರೆ: ‘ನನ್ನ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ.
‘ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
‘ಶಾಮನೂರು ಕುಟುಂಬದವರು ಒಂದು ಗಂಟೆ ತಡವಾಗಿ ಭೇಟಿಯಾದರೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಯಿಯ ರೀತಿಯಲ್ಲಿ ಅವರ ಬಾಗಿಲಿನಲ್ಲಿ ಕಾಯುತ್ತಾರೆ’ ಎಂದು ಶಾಸಕ ಬಿ.ಪಿ. ಹರೀಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದರು.
‘ಶಾಸಕರು ಸಭೆ– ಸಮಾರಂಭಗಳಿಗೆ ಬಂದರೆ ಎಸ್‌ಪಿ ಮುಖ ತಿರುಗಿಸಿಕೊಂಡು ಕುಳಿತಿರುತ್ತಾರೆ. ಶಾಮನೂರು ಮನೆತನದವರು ಬಂದರೆ ನಾಯಿ ರೀತಿ ನಡೆದುಕೊಳ್ಳುತ್ತಾರೆ’ ಎಂದು ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.