ADVERTISEMENT

ಕೋಮು ಭಾವನೆ ಕೆರಳಿಸಿದ ಹಿನ್ನೆಲೆ: ರೇಣುಕಾಚಾರ್ಯ ವಿರುದ್ಧ ಎಫ್ಐಆರ್‌

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 1:46 IST
Last Updated 31 ಜನವರಿ 2020, 1:46 IST
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ   

ದಾವಣಗೆರೆ: ಕೋಮು ಭಾವನೆ ಕೆರಳಿಸಿದ ಸಂಬಂಧ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನಿರ್ದಿಷ್ಟ ಸಮುದಾಯದ ಕೋಮು ಭಾವನೆ ಕೆರಳಿಸಿರುವ ಸಂಬಂಧ ಐಪಿಸಿ ಸೆಕ್ಷನ್‌ 153 ಎ ಮತ್ತು 295 ಎ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಮಸೀದಿಗಳಲ್ಲಿ ಪ್ರಾರ್ಥನೆಯ ಹೆಸರಿನಲ್ಲಿ ಮದ್ದು–ಗುಂಡು, ಬಂದೂಕುಗಳನ್ನು ಸಂಗ್ರಹಿಸಿ ಫತ್ವಾ ಹೊರಡಿಸುವ ಮೌಲಾಗಳೇ ನಿಮಗೆ ಎಚ್ಚರಿಕೆ. ಮಸೀದಿಗಳಲ್ಲಿ ಮದ್ದು–ಗುಂಡು ಇರುತ್ತದೆ. ನಮ್ಮ ದೇವಾಲಯಗಳಿಗೆ ಬನ್ನಿ, ಅಲ್ಲಿ ನಿಮಗೆ ತೀರ್ಥ, ಪ್ರಸಾದ ಮಾತ್ರ ಸಿಗುತ್ತದೆ’ ಎಂದು ಈಚೆಗೆ ನಡೆದ ಸಿಎಎ ರ‍್ಯಾಲಿಯಲ್ಲಿ ರೇಣುಕಾಚಾರ್ಯ ಹೇಳಿದ್ದರು.

ADVERTISEMENT

ಈ ಸಂಬಂಧ ಹೊನ್ನಾಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ಆಧರಿಸಿ ಪೊಲೀಸರುಎಫ್‌ಐಆರ್‌ ದಾಖಲಿಸಿದ್ದಾರೆ. ರೇಣುಕಾಚಾರ್ಯ ಹೇಳಿಕೆ ಖಂಡಿಸಿ ಮುಸ್ಲಿಂ ಸಮುದಾಯದವರು ಪ್ರತಿಭಟನೆಯನ್ನೂ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.