ADVERTISEMENT

ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ಪ್ರಕರಣ

ಧ್ವಜ ಕಟ್ಟುವ ವಿಚಾರದಲ್ಲಿ ವಾಗ್ವಾದ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 16:17 IST
Last Updated 16 ಸೆಪ್ಟೆಂಬರ್ 2024, 16:17 IST

ದಾವಣಗೆರೆ: ಇಲ್ಲಿನ ಗಾಂಧಿ ನಗರದ ಮೊಬೈಲ್ ಟವರ್ ಮೇಲೆ ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ ನಡೆಸಿದ ಎಂಟು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗಾಂಧಿ ನಗರ ಮುಖ್ಯ ರಸ್ತೆಯ ಮೊಬೈಲ್ ಟವರ್ ಮೇಲೆ ಎರಡು ಧ್ವಜಗಳನ್ನು ಕಟ್ಟಲಾಗಿತ್ತು. ಈ ವಿಚಾರವಾಗಿ ಭಾನುವಾರ ಎರಡು ಕೋಮಿನ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಧ್ವಜಗಳನ್ನು ತೆರವುಗೊಳಿಸಿದ್ದರು.

‘ವಾಗ್ವಾದಕ್ಕೆ ಕಾರಣವಾಗಿದ್ದ ಧ್ವಜಗಳನ್ನು ತೆರವುಗೊಳಿಸಲಾಗಿದೆ. ಆಜಾದ್‌ ನಗರ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪರಿಸ್ಥಿತಿ ಶಾಂತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.