ADVERTISEMENT

ಪ್ರಥಮ ಭಾಷೆ ಪರೀಕ್ಷೆ: 1,133 ಗೈರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 20,427 ಮಂದಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 14:51 IST
Last Updated 2 ಜುಲೈ 2020, 14:51 IST
ದಾವಣಗೆರೆಯ ಸರ್ಕಾರಿ ಹೈಸ್ಕೂಲ್‌ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಪೋಷಕರ ಸಹಾಯದಿಂದ ಬಂದ ಅಂಗವಿಕಲ ವಿದ್ಯಾರ್ಥಿನಿ–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ಸರ್ಕಾರಿ ಹೈಸ್ಕೂಲ್‌ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಪೋಷಕರ ಸಹಾಯದಿಂದ ಬಂದ ಅಂಗವಿಕಲ ವಿದ್ಯಾರ್ಥಿನಿ–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಎಸ್ಸೆಸ್ಸೆಲ್ಸಿಗೆ ಸಂಬಂಧಿಸಿದಂತೆ ಗುರುವಾರ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,133 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹೆಸರು ನೋಂದಾಯಿಕೊಂಡ 21,560 ಮಂದಿಯಲ್ಲಿ 20,427 ಜನ ಪರೀಕ್ಷೆಗೆ ಹಾಜರಾಗಿದ್ದಾರೆ.

ಕಂಟೈನ್‌ಮೆಂಟ್‌ ವಲಯದ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಪೀಡಿತರು ಯಾರೂ ಇರಲಿಲ್ಲ. ಮೊದಲ ಬಾರಿಗೆ 20,015 ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಖಾಸಗಿಯಾಗಿ 453 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 94 ಮಂದಿ ಬಂದಿಲ್ಲ. 359 ಮಂದಿ ಹಾಜರಾಗಿದ್ದಾರೆ.

ನೆರೆ ರಾಜ್ಯಗಳಿಂದ ಯಾರೂ ಪರೀಕ್ಷೆ ಬರೆದಿಲ್ಲ. 392 ಮಂದಿ ವಲಸೆ ಬಂದ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 4 ಮಂದಿ ಗೈರಾಗಿದ್ದಾರೆ. 388 ಮಂದಿ ಪರೀಕ್ಷೆ ಬರೆದಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಯಾವುದೇ ಗೊಂದಲಗಳು ಉಂಟಾಗಿಲ್ಲ. ಪರೀಕ್ಷೆ ಸರಾಗವಾಗಿ ನಡೆದಿದೆ ಎಂದು ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.