ADVERTISEMENT

ಮೀಸಲಾತಿ ಗೊಂದಲ ಸರಿಪಡಿಸಿ: ಸತೀಶ ಜಾರಕಿಹೊಳಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 5:25 IST
Last Updated 7 ನವೆಂಬರ್ 2022, 5:25 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಬಗ್ಗೆ ಕೆಲವು ಗೊಂದಲಗಳು ಇದ್ದು, ಅದು ಸರಿಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಳದ ಬಗ್ಗೆ‌ ಇನ್ನೂ ಮಹತ್ವದ ಕೆಲಸಗಳು ಆಗಬೇಕಿದ್ದು, ಕೇಂದ್ರ ಸರ್ಕಾರ ಈ ವಿಚಾರದಲ್ಲಿ‌ ಕೆಲ ನಿರ್ಣಯ ತೆಗೆದುಕೊಳ್ಳಬೇಕಾಗಿದೆ. ‌ನಾವೇ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ‌ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ಅದನ್ನು ಸ್ವಾಗತಿಸುತ್ತೇವೆ. ಆದರೆ ಅದು ಶಾಶ್ವತವಾಗಿ ಆಗಬೇಕು’ ಎಂದರು.

‘ಈಗ ಮೀಸಲಾತಿ ಹೆಚ್ಚಳ ಮಾಡಿರುವುದರಲ್ಲಿ ಹತ್ತಾರು ಗೊಂದಲಗಳು ಇದ್ದು ಅವುಗನ್ನು ಸರಿಪಡಿಸಬೇಕು’ ಎಂದು ಹೇಳಿದರು.

ADVERTISEMENT

ಬಿಜೆಪಿಯವರು ಅಹಿಂದ ನಾಯಕರನ್ನು ಸೆಳೆಯುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಿದ್ದಾರೆ. ಅದು ಆರಂಭ ಆಗಿಲ್ಲ. ಮೇಲಾಗಿ ಇದು ಚುನಾವಣಾ ವರ್ಷ ಪಕ್ಷಾಂತರ ಪರ್ವ ನಡೆಯುವುದು ಸಾಮಾನ್ಯ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.