ADVERTISEMENT

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲಿ: ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 15:50 IST
Last Updated 17 ಡಿಸೆಂಬರ್ 2023, 15:50 IST
ಹೊನ್ನಾಳಿ ಸರ್ಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಳೆದ 20 ದಿನಗಳಿಂದ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು ಮಾತನಾಡಿದರು
ಹೊನ್ನಾಳಿ ಸರ್ಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಳೆದ 20 ದಿನಗಳಿಂದ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು ಮಾತನಾಡಿದರು   

ಹೊನ್ನಾಳಿ: ‘ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪಾಠ ಪ್ರವಚನದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಶನಿವಾರ ಕಾಲೇಜಿಗೆ ಭೇಟಿ ನೀಡಿ ಮಾತನಾಡಿದ ಅವರು, ಕಳೆದ 20 ದಿನಗಳಿಂದ 38 ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 10 ಜನ ಉಪನ್ಯಾಸಕರು ಮಾತ್ರ ದೈನಂದಿನ ಪಾಠದಲ್ಲಿ ತೊಡಗಿದ್ದಾರೆ. ಆದರೆ, ಇಲ್ಲಿ ಸುಮಾರು 1,200 ವಿದ್ಯಾರ್ಥಿಗಳು ಇದ್ದಾರೆ, ಅವರಿಗೆಲ್ಲ ಖಾಯಂ ಉಪನ್ಯಾಸಕರು ಎಷ್ಟು ಪಾಠ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಈ ಸರ್ಕಾರಿ ಕಾಲೇಜಿಗೆ ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರ ಪೋಷಕರು ಕಡುಬಡತನದಲ್ಲಿ ತಮ್ಮ ಮಕ್ಕಳನ್ನು ಕಾಲೇಜಿಗೆ ಕಳಿಸುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.