ADVERTISEMENT

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸ್ಥಾಪನಾ ದಿನಾಚರಣೆ

ಗ್ರಾಹಕ, ವ್ಯಾಪಾರಿಗಳಿಗೆ ಮಾಸ್ಕ್, ಸಾನಿಟೈಸರ್ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 5:28 IST
Last Updated 21 ಏಪ್ರಿಲ್ 2021, 5:28 IST
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ 76ನೇ ಸ್ಥಾಪನಾ ದಿನದ ಅಂಗವಾಗಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಿಸಲಾಯಿತು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ 76ನೇ ಸ್ಥಾಪನಾ ದಿನದ ಅಂಗವಾಗಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಿಸಲಾಯಿತು.   

ಪ್ರಜಾವಾಣಿ ವಾರ್ತೆ

ದಾವಣಗೆರೆ:ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ 76ನೇ ಸ್ಥಾಪನಾ ದಿನದ ಅಂಗವಾಗಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಮಂಡಿಪೇಟೆ ಮತ್ತು ವಿದ್ಯಾನಗರ ಶಾಖೆಗಳ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್‌ಪಾತ್ ವ್ಯಾಪಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಿಸಲಾಯಿತು.

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ‌. ರಾಘವೇಂದ್ರ ನಾಯರಿ ಮಾತನಾಡಿ, ‘ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946ರ ಏಪ್ರಿಲ್‌ 20ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿದ್ದು, ಅಂದಿನಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ’ ಎಂದರು.

ADVERTISEMENT

‘ಬ್ಯಾಂಕಿಂಗ್ ಸೌಲಭ್ಯವು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಬೇಕು. ಸಾರ್ವಜನಿಕ ವಲಯದ ಬ್ಯಾಂಕುಗಳು ಗಳಿಸುವ ಲಾಭವು ದೇಶದ ಜನರ ಕಲ್ಯಾಣಕ್ಕಾಗಿ ವಿನಿಯೋಗಿಸಬೇಕೇ ವಿನಃ ಖಾಸಗಿ ಬಂಡವಾಳಶಾಹಿಗಳ ಲೂಟಿಗಾಗಿ ಅಲ್ಲ ಎನ್ನುವುದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸ್ಪಷ್ಟ ನಿಲುವಾಗಿದೆ. ಇದಕ್ಕಾಗಿ ಸತತ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ’ ಎಂದರು.

ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ. ಆನಂದಮೂರ್ತಿ, ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆಯ ಮುಖ್ಯ ಪ್ರಬಂಧಕ ಆರ್.ಬಿ. ಸಂಜೀವಪ್ಪ, ಕೆನರಾ ಬ್ಯಾಂಕ್ ವರ್ಕಮೆನ್ ಎಂಪ್ಲಾಯೀಸ್ ಯೂನಿಯನ್‌ನ ಕೇಂದ್ರ ಸಮಿತಿ ಸದಸ್ಯ ಆರ್. ಆಂಜನೇಯ, ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಪದಾಧಿಕಾರಿಗಳಾದ ಕೆ.ವಿಶ್ವನಾಥ ಬಿಲ್ಲವ, ಸಿ. ಪರಶುರಾಮ ಹಾಗೂ ಕಾಡಜ್ಜಿ ಎನ್‌. ವೀರಪ್ಪ, ಕೆ. ಶಶಿಶೇಖರ್, ದಾದಾಪೀರ್. ಸಿದ್ದಲಿಂಗೇಶ್ ಕೋರಿ, ಕೆ. ಸುನಂದಮ್ಮ, ಡಿ.ಎಂ. ಆನಂದಕುಮಾರ್, ಎಂ. ಸಂದೀಪ್, ಡಿ.ಎ.ಸಾಕಮ್ಮ, ಬಿ.ಎನ್. ಶ್ವೇತಾ, ಆಶಾ ವಿದ್ಯಾಸಾಗರ್, ದರ್ಶನ್, ಡಿ.ಎ. ರವಿ, ಅಂಬರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.