ADVERTISEMENT

ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆ ಸಾವು

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 15:54 IST
Last Updated 18 ಜನವರಿ 2026, 15:54 IST
<div class="paragraphs"><p>ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆ ಸಾವು</p></div>

ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆ ಸಾವು

   

ದಾವಣಗೆರೆ: ತಾಲ್ಲೂಕಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನಾಲ್ಕು ದಿನಗಳಿಂದ ಜಿಂಕೆಗಳು ನಿರಂತರವಾಗಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಜ.19ರಿಂದ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಇರುವುದಿಲ್ಲ.

ADVERTISEMENT

ಜ.16ರಂದು ಚುಕ್ಕೆ ಜಿಂಕೆಯೊಂದು ಮೃತಪಟ್ಟಿತ್ತು. ಜ.17ರಂದು ಎರಡು ಹಾಗೂ ಭಾನುವಾರ ಮತ್ತೊಂದು ಜಿಂಕೆ ಮೃತಪಟ್ಟಿದೆ. ಉಳಿದ ಜಿಂಕೆಗಳಿಗೆ ಈ ರೋಗ ಹರಡಂತೆ ತಡೆಯಲು ಅರಣ್ಯ ಇಲಾಖೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ಚಿಕಿತ್ಸೆಗೆ ಬೆಳಗಾವಿ ಹಾಗೂ ಬೆಂಗಳೂರಿನಿಂದ ತಜ್ಞರು ಧಾವಿಸುತ್ತಿದ್ದಾರೆ. ಮೃಗಾಲಯದಲ್ಲಿ 94 ಹೆಣ್ಣು, 58 ಗಂಡು ಹಾಗೂ 18 ಮರಿಗಳು ಸೇರಿ 170 ಜಿಂಕೆಗಳಿದ್ದವು.

‘ಜಿಂಕೆ ಮೃತಪಟ್ಟ ತಕ್ಷಣ ಮಾರ್ಗಸೂಚಿ ಪ್ರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು. ಪ್ರಾಣಿ ಆರೋಗ್ಯ ಸಲಹಾ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಾವಿನ ನಿಖರ ಕಾರಣ ಅರಿಯಲು ರಕ್ತ ಮತ್ತು ಅಂಗಾಂಗಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‘ಪ್ರಜಾವಾಣಿಗೆ’ ತಿಳಿಸಿದ್ದಾರೆ.

‘ಮೃತ ಜಿಂಕೆಗಳ ರೋಗ ಲಕ್ಷಣಗಳನ್ನು ಗಮನಿಸಿ ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಇರಬಹುದು ಎಂದು ಶಂಕಿಸಲಾಗಿದೆ. ಉಳಿದ ಜಿಂಕೆಗಳಿಗೆ ರೋಗ ನಿರೋಧಕಗಳನ್ನು ನೀಡಲಾಗಿದೆ. ಮುನ್ನೆಚ್ಚರಿಕೆ ಚಿಕಿತ್ಸೆಯನ್ನು ತಕ್ಷಣ ಪ್ರಾರಂಭಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.