ADVERTISEMENT

ಜಾತಿ ತಾರತಮ್ಯ ಬದಿಗಿಡಿ: ಜಿ.ಎ. ರುದ್ರೇಶ್ ಗೌಡ

ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 6:34 IST
Last Updated 26 ಫೆಬ್ರುವರಿ 2026, 6:34 IST
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಚನ್ನಗಿರಿ: ‘ಯಾವುದೇ ಸಂಸ್ಥೆಯಾಗಿರಲಿ ಜಾತಿ ತಾರತಮ್ಯವನ್ನು ಬದಿಗಿಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬುದು ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ಮುಖ್ಯ ಉದ್ದೇಶವಾಗಿದೆ’ ಎಂದು ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಜಿ.ಎ. ರುದ್ರೇಶ್ ಗೌಡ ತಿಳಿಸಿದರು. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

‘ಈ ಪ್ರತಿಷ್ಠಾನದಲ್ಲಿ ಇರುವವರು ರಾಜಕೀಯ ಪಕ್ಷಗಳಿಂದ ಅಂತರವನ್ನು ಕಾಯ್ದುಕೊಳ್ಳಬೇಕು. ರಾಜಕೀಯ ಬೇರೆ, ಪ್ರತಿಷ್ಠಾನದ ಉದ್ದೇಶವೇ ಬೇರೆಯಾಗಿರುತ್ತದೆ. ಸಮಾಜದಲ್ಲಿ ಆಗುತ್ತಿರುವ ಅಂಕುಡೊಂಕುಗಳನ್ನು ಸರಿಪಡಿಸಲು ಪ್ರತಿಷ್ಠಾನ ಶ್ರಮಿಸಲಿದೆ. ಬದ್ಧತೆಯಿಂದ ಕಾರ್ಯನಿರ್ವಸುತ್ತೇನೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸಾರ್ವಜನಿಕರ ಕೆಲಸಗಳು ಬೇಗ ಆಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು. ನೊಂದವರ ಧ್ವನಿಯಾಗಿ ಪ್ರತಿಷ್ಠಾನ ಕಾರ್ಯ ನಿರ್ವಹಿಸಲಿದೆ’ ಎಂದರು. 

ADVERTISEMENT

ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ನಾಗೇಂದ್ರಪ್ಪ, ಗೌರವಾಧ್ಯಕ್ಷ ಗಂಗಾಧರಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ಕಾರ್ಯದರ್ಶಿ ನಾಗರಾಜ್, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶೈಲೇಶ್ ಪಾಟೀಲ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ರಾಜು, ಬಿ.ಎಂ. ಶಿವಪ್ಪ, ಸುರೇಶ್ ದೊಡ್ಡಮನಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.