ADVERTISEMENT

ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಉಪವಿಭಾಗಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 15:21 IST
Last Updated 31 ಜುಲೈ 2024, 15:21 IST
ನ್ಯಾಮತಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಉಪವಿಭಾಗಾಧಿಕಾರಿ ವಿ.ಅಭಿಷೇಕ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು
ನ್ಯಾಮತಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಉಪವಿಭಾಗಾಧಿಕಾರಿ ವಿ.ಅಭಿಷೇಕ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು   

ನ್ಯಾಮತಿ: ಪಟ್ಟಣದ ಎಚ್.ಶಿವಾನಂದಪ್ಪ ಬಡಾವಣೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊನ್ನಾಳಿ-ಚನ್ನಗಿರಿ ಉಪವಿಭಾಗಾಧಿಕಾರಿ ವಿ.ಅಭಿಷೇಕ ಈಚೆಗೆ ಭೇಟಿ ನೀಡಿದರು.

ವಸತಿನಿಲಯದ ವಿದ್ಯಾರ್ಥಿನಿಯರ ಸಂಖ್ಯೆ, ಊಟ-ವಸತಿ, ದಾಖಲೆಗಳ ನಿರ್ವಹಣೆ, ಆಹಾರ ಪದಾರ್ಥಗಳ ದಾಸ್ತಾನು, ಶೌಚಾಲಯ ವ್ಯವಸ್ಥೆ, ಭದ್ರತೆ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ವಸತಿನಿಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ವಸತಿ ನಿಲಯದ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು, ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.

ADVERTISEMENT

ವಸತಿನಿಲಯದ ಸುತ್ತ ತಡೆಗೋಡೆ ನಿರ್ಮಾಣ ಮತ್ತು ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದು ಹಿಂದುಳಿದ ವರ್ಗಗಳ ತಾಲ್ಲೂಕು ಕಲ್ಯಾಣ ಇಲಾಖೆ ಅಧಿಕಾರಿ ಎಂ. ಮೃತ್ಯುಂಜಯಸ್ವಾಮಿ ಮತ್ತು ನಿಲಯ ಮೇಲ್ವಿಚಾರಕಿ ಎಚ್.ಸೀಮಾ ಮನವಿ ಮಾಡಿದರು.

ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಎಚ್.ಎಲ್. ಉಮಾ, ಕಂದಾಯ ನಿರೀಕ್ಷಕ ವೃಷಬೇಂದ್ರಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಎಸ್.ಪಿ. ವಿಜಯಕುಮಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.