ADVERTISEMENT

ದಾವಣಗೆರೆ: ವೈಭವದ ವಿಜಯಯ ದಶಮಿ ಶೋಭಾಯಾತ್ರೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 9:26 IST
Last Updated 5 ಅಕ್ಟೋಬರ್ 2022, 9:26 IST
ವಿಜಯ ದಶಮಿ ಪ್ರಯುಕ್ತ ದಾವಣಗೆರೆ ಬೇತೂರು ರಸ್ತೆಯ ವೆಂಕಟೇಶ್ವರ ದೇವಸ್ಥಾನದಿಂದ ಬೀರಲಿಂಗೇಶ್ವರ ದೇವಸ್ಥಾನದವರೆಗೆ ವೈಭವದ ಶೋಭಾಯಾತ್ರೆ ನಡೆಯಿತು
ವಿಜಯ ದಶಮಿ ಪ್ರಯುಕ್ತ ದಾವಣಗೆರೆ ಬೇತೂರು ರಸ್ತೆಯ ವೆಂಕಟೇಶ್ವರ ದೇವಸ್ಥಾನದಿಂದ ಬೀರಲಿಂಗೇಶ್ವರ ದೇವಸ್ಥಾನದವರೆಗೆ ವೈಭವದ ಶೋಭಾಯಾತ್ರೆ ನಡೆಯಿತು   

ದಾವಣಗೆರೆ: ವಿಶ್ವ ಹಿಂದೂ ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ವಿಜಯದಶಮಿ ಮಹೋತ್ಸವದ ನಿಮಿತ್ತ ಬುಧವಾರ ಬೃಹತ್ ಶೋಭಾಯಾತ್ರೆ ನಡೆಯಿತು.

ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಹಿರೇಹಡಗಲಿ ಹಾಲಸ್ವಾಮಿ ಸಂಸ್ಥಾನ ಮಠದ ಅಭಿನವ ಹಾಲಸ್ವಾಮೀಜಿ, ವಿನೋಬನಗರ ಜಡೇಸಿದ್ದ ಶಿವಯೋಗೀಶ್ವರ ಶಾಂತಾಶ್ರಮದ ಶಿವಾನಂದ ಸ್ವಾಮೀಜಿ ಮುಂತಾದವರು ಮೆರವಣಿಗೆಗೆ ಚಾಲನೆ ನೀಡಿದರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್‌, ಮೇಯರ್‌ ಜಯಮ್ಮ ಗೋಪಿನಾಯ್ಕ್‌, ಮುಖಂಡರಾದ ವೀರೇಶ್‌ ಹನಗವಾಡಿ, ಕೆ.ಎಂ. ಸುರೇಶ್‌, ಎಸ್‌.ಟಿ.ವೀರೇಶ್‌, ರಾಜನಹಳ್ಳಿ ಶಿವಕುಮಾರ್‌, ಸತೀಶ್‌ ಪೂಜಾರಿ, ಬಿ.ಜಿ. ಅಜಯ್‌ಕುಮಾರ್‌, ಕೋಳೆನಹಳ್ಳಿ ಸತೀಶ್‌, ಯಶವಂತರಾವ್‌ ಜಾಧವ್‌, ಸೋಗಿ ಶಾಂತಕುಮಾರ್‌, ವೈ ಮಲ್ಲೇಶ್‌, ಶಂಕರನಾರಾಯಣ ಮುಂತಾದವರು ಇದ್ದರು.

‘ನಗರದ ಪ್ರಮುಖ ಬೀದಿಗಳಲ್ಲಿ ಸಾಗುವ ಮೆರವಣಿಗೆ ಜೊತೆ ಸಮಾಳ, ನಂದಿಕೋಲು, ವೀರಗಾಸೆ, ಕೊಂಬು ಕಹಳೆ, ಡೊಳ್ಳು ಕುಣಿತ, ಸಾಂಪ್ರದಾಯಿಕ ವಾದ್ಯಗಳು, ಸ್ಥಬ್ದ ಚಿತ್ರಗಳು, ಕೀಳುಕುದುರೆ, ಕೋಲಾಟ ತಂಡಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ಸಾವಿರಾರು ಯುವಕರು ಡಿಜೆ ಸದ್ದಿಗೆ ಹೆಜ್ಜೆ ಹಾಕಿದರು.

ADVERTISEMENT

ವಿಜಯ ದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗಣ್ಯರನ್ನು ಅಮಾನುಲ್ಲಾ ಖಾನ್‌ ನೇತೃತ್ವದಲ್ಲಿ ಸನ್ಮಾನಿಸಿ ಸೌಹಾರ್ದ ಸಾರಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಮೆರವಣಿಗೆ ಬೀರಲಿಂಗೇಶ್ವರ ದೇವಸ್ಥಾನ ಬಳಿ ಸಮಾಪನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.