ಹರಿಹರ: ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು.
ಬೆಳಿಗ್ಗೆಯಿಂದಲೆ ಮೋಡ ಕವಿತ ವಾತಾರಣವಿತ್ತು. ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಸತತ ಮಳೆ ಸುರಿಯಿತು.
ಮಂಗಳವಾರ ಸಂತೆ ದಿನವಾಗಿದ್ದು, ವ್ಯಾಪಾರಿಗಳು ಹಾಗೂ ಖರೀದಿದಾರರು ಮಳೆಯಿಂದಾಗಿ ಸಂಕಷ್ಟ ಅನುಭವಿಸಿದರು. ಬೀದಿಬದಿ ವ್ಯಾಪಾರಿಗಳು ತಮ್ಮ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು.
ಚರಂಡಿಗಳಲ್ಲಿ ರಭಸವಾಗಿ ನೀರು ಹರಿದ ಪರಿಣಾಮ ಕಟ್ಟಿಕೊಂಡಿದ್ದ ಹೂಳು ತೆರವುಗೊಂಡು ಚರಂಡಿಗಳು ಸ್ವಚ್ಚವಾದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.