ADVERTISEMENT

ಗ್ರಾ.ಪಂ. ಚುನಾವಣೆ ಘರ್ಷಣೆ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 2:33 IST
Last Updated 4 ಜನವರಿ 2021, 2:33 IST

ಜಗಳೂರು: ತಾಲ್ಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನಡೆದ ಎರಡು ಗುಂಪುಗಳ ಘರ್ಷಣೆಯಲ್ಲಿವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ

ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟವರು.

ಪಂಚಾಯಿತಿ ಚುನಾವಣೆಗೆ ಸಂಬಂಧ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕೃಷ್ಣಪ್ಪ ಅವರ ಮೇಲೆ ಹಲ್ಲೆ ನಡೆದಿದ್ದು, ಸ್ಥಳದಲ್ಲೇ ಮೃತ‍ಪಟ್ಟಿದ್ದಾರೆ ಎಂದು ಸಿಪಿಐ ಡಿ. ದುರುಗಪ್ಪ ತಿಳಿಸಿದ್ದಾರೆ.

ADVERTISEMENT

ಘರ್ಷಣೆಯಲ್ಲಿ ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.