ಹರಿಹರ: ಇಲ್ಲಿನ ಪ್ರತಿಷ್ಠಿತ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು.
ನಗರದ ಜಿಟಿಟಿಸಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಕೇಂದ್ರದ ಪಾಚಾರ್ಯ ಲಕ್ಷ್ಮಣ ನಾಯ್ಕ ಅವರ ಮನವಿಯಂತೆ ಈ ಭರವಸೆ ನೀಡಿದರು.
ಕೇಂದ್ರದಲ್ಲೀಗ ಟೂಲ್ ಆ್ಯಂಡ್ ಡೈ ಮೇಕಿಂಗ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಆಟೋಮೇಷನ್ ಆ್ಯಂಡ್ ರೊಬೋಟಿಕ್ಸ್, ಪ್ರಿಸಿಷನ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್ ಎಂಬ 4 ವಿಭಾಗಗಳಿವೆ. ವಿವಿಧ ತಾಲ್ಲೂಕುಗಳ 503 ವಿದ್ಯಾರ್ಥಿಗಳು ಓದುತ್ತಿದ್ದಾರೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಅಗತ್ಯ ಇದೆ ಎಂದು ಪ್ರಾಚಾರ್ಯರು ಸಚಿವರ ಗಮನ ಸೆಳೆದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಕುಮಾರ್ ಮಲ್ಲಾಡದ, ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್, ಅಧ್ಯಾಪಕರಾದ ಶಿವಕುಮಾರ್, ಗಣೇಶ್ ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.