ದಾವಣಗೆರೆ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಪಾಲಕರಿಗೆ ‘ಗ್ಯಾರಂಟಿ’ ಯೋಜನೆಯಲ್ಲಿ ಆದ್ಯತೆ ನೀಡುವ ನೀತಿ ರೂಪಿಸುವ ಅಗತ್ಯವಿದೆ. ಆಗ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿ, ಶಾಲೆಗಳೂ ಅಭಿವೃದ್ಧಿ ಹೊಂದಲಿವೆ’ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.
ಶುಕ್ರವಾರ ಇಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಗೃಹಲಕ್ಷ್ಮಿ ಯೋಜನೆಯಡಿ ₹ 2,000 ಹಾಗೂ ‘ಗೃಹಜ್ಯೋತಿ’ ಯೋಜನೆಯಡಿ ವಿದ್ಯುತ್ ಶುಲ್ಕ ಉಚಿತವಾಗಿ ಸಿಗುತ್ತಿದೆ. ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವವರಿಗೆ ಆದ್ಯತೆ ನೀಡಬೇಕು’ ಎಂದರು.
‘ಆಗ ‘ಗ್ಯಾರಂಟಿ’ಗಳು ಕೈತಪ್ಪುವ ಭಯದಲ್ಲಿ ಫಲಾನುಭವಿಗಳು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.