ADVERTISEMENT

ಮದ್ಯದಂಗಡಿಗೆ ಕೋಟಿ ದರ ನಿಗದಿ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 11:23 IST
Last Updated 25 ಡಿಸೆಂಬರ್ 2025, 11:23 IST
   

ದಾವಣಗೆರೆ: ಮದ್ಯದಂಗಡಿ ಪರವಾನಗಿಗೆ ₹ 1.95 ಕೋಟಿ ದರ ನಿಗದಿಪಡಿಸಿದ ರಾಜ್ಯ ಸರ್ಕಾರ, ಪ್ರತಿ ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಾಜಾನೆ ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ರಾಜ್ಯ ಸರ್ಕಾರದ ಹೊಸವರ್ಷದ ಕೊಡುಗೆ’ ಎಂದು ಗುರುವಾರ ಸುದ್ದಿಗಾರರ ಬಳಿ ಮಾತನಾಡಿದರು.

‘ರಾಜ್ಯ ಸರ್ಕಾರದ ಖಜಾನೆಯಿಂದ ಸಾವಿರಾರು ಕೋಟಿ ಹಣ ಬಿಡುಗಡೆಯಾಗಿರುವುದು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೊತ್ತಿಲ್ಲ. ಹಲವು ಬಾರಿ ಬಜೆಟ್‌ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದರು.

ADVERTISEMENT

‘ರಾಜ್ಯದ ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ಸರ್ಕಾರ ರಚನೆಯಾದ ದಿನದಿಂದ ಅಧಿಕಾರ ಹಂಚಿಕೆಯ ಕಿತ್ತಾಟ ನಡೆಯುತ್ತಿದೆ. ಇನ್ನೂ ಎಷ್ಟು ದಿನ ಹೀಗೆ ಕಾಲ ಕಳೆಯುತ್ತೀರಿ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.