ADVERTISEMENT

ಆಫ್ರಿಕಾದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದ ಜನ ತವರಿಗೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 2:58 IST
Last Updated 3 ಮಾರ್ಚ್ 2026, 2:58 IST
ಚಾಡ್ ದೇಶದಿಂದ ಮರಳಿದ ಹಕ್ಕಿಪಿಕ್ಕಿ ಸಮುದಾಯದ ಜನರು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ದಾವಣಗೆರೆ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದರು
ಚಾಡ್ ದೇಶದಿಂದ ಮರಳಿದ ಹಕ್ಕಿಪಿಕ್ಕಿ ಸಮುದಾಯದ ಜನರು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ದಾವಣಗೆರೆ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದರು   

ದಾವಣಗೆರೆ: ಮಧ್ಯ ಆಫ್ರಿಕಾದ ರಾಷ್ಟ್ರ ಚಾಡ್‌ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದ 8 ಜನರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ತವರಿಗೆ ವಾಪಾಸ್‌ ಬರಲು ಸಹಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರನ್ನು ಸೋಮವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ 8 ಜನರು ಗಿಡಮೂಲಿಕೆ ಮಾರಾಟಕ್ಕೆ ಚಾಡ್‌ ದೇಶಕ್ಕೆ ತೆರಳಿದ್ದರು. ಇವರ ವೀಸಾ ಅವಧಿ ಡಿ.22ಕ್ಕೆ ಮುಕ್ತಾಯವಾಗಿತ್ತು. ಇವರ ಪಾಸ್‌ಪೋರ್ಟ್‌ಗಳನ್ನು ಫೆಬ್ರುವರಿ ಮೊದಲ ವಾರದಲ್ಲಿ ವಶಕ್ಕೆ ಪಡೆದ ಚಾಡ್‌ ದೇಶದ ಅಧಿಕಾರಿಗಳು ಬಂಧಿಸುವ ಎಚ್ಚರಿಕೆ ನೀಡಿದ್ದರು.

‘ಮಾಹಿತಿ ತಿಳಿದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಅಧಿಕಾರಿಗಳೊಂದಿಗೆ ತ್ವರಿತಗತಿಯಲ್ಲಿ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಇದರ ಪರಿಣಾಮವಾಗಿ ಎಲ್ಲರೂ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಸಾಧ್ಯವಾಯಿತು’ ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.