ಬಿ.ಪಿ.ಹರೀಶ್
ದಾವಣಗೆರೆ: ಕೆರೆಯ ಮಣ್ಣು ತುಂಬುವ ವಿಚಾರದಲ್ಲಿ ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
'ತಾಲ್ಲೂಕಿನ ಕಾಡಜ್ಜಿ ಕೆರೆಯ ಅಂಗಳದಲ್ಲಿ ವ್ಯವಸಾಯಕ್ಕೆಂದು ಟ್ರ್ಯಾಕ್ಟರ್ ಗೆ ಮಣ್ಣನ್ನು ತುಂಬಿಕೊಳ್ಳುತ್ತಿದ್ದಾಗ ಸ್ಥಳಕ್ಕೆ ಬಂದ ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಆಪ್ತ ಸಹಾಯಕ ಜಾತಿ ನಿಂದನೆ ಮಾಡಿದ್ದಾರೆ' ಎಂದು ಕಾಡಜ್ಜಿ ಗ್ರಾಮದ ನಿವಾಸಿ, ಭೋವಿ ಸಮುದಾಯದ ಕಾಂತರಾಜ್ ಎಚ್. ದೂರು ನೀಡಿದ್ದರು.
ದೂರಿನ ಅನ್ವಯ ಪೊಲೀಸರು ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಶಾಸಕರ ಆಪ್ತ ಸಹಾಯಕನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.