ADVERTISEMENT

ಹರಿಹರ: ಜಿಟಿಟಿಸಿ ಅಲ್ಪಾವಧಿ ತಾಂತ್ರಿಕ ತರಬೇತಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 15:21 IST
Last Updated 21 ಏಪ್ರಿಲ್ 2025, 15:21 IST

ಹರಿಹರ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ ತರಬೇತಿ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.

16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ತರಬೇತಿ ಹಮ್ಮಿಕೊಳ್ಳಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಅಥವಾ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಸಿಎನ್‌ಸಿ ಪ್ರೋಗ್ರಾಮರ್, ಕನ್ವೆನ್ಷನಲ್ ಟರ್ನರ್ ಮಿಲ್ಲಿಂಗ್ ಮಷಿನ್, ಕನ್ವೆನ್ಷನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್ಷನಲ್ ಸರ್ಫೇಸ್ ಗ್ರೈಂಡರ್ ಆಪರೇಟರ್ ಸೇರಿದಂತೆ ಇನ್ನಿತರ ಕೋರ್ಸ್‌ಗಳಿಗೆ ಅಲ್ಪಾವಧಿ ತರಬೇತಿ ನೀಡಲಾಗುವುದು.

ADVERTISEMENT

ಈ ತರಬೇತಿಯ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು, ತರಬೇತಿ ಮುಗಿದ ನಂತರ ಉದ್ಯೋಗವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಮೇ 2ರೊಳಗೆ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಇಂಡಸ್ಟ್ರಿಯಲ್ ಏರಿಯಾ, ಹರ್ಲಾಪುರ, ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ, ಹರಿಹರ, ಪೋನ್ ನಂ: 9743185553, 9611025932, 9164369670 ಸಂಪರ್ಕಿಸಲು ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.