ADVERTISEMENT

‘ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಲಾಭದಾಯಕ’

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 5:20 IST
Last Updated 5 ಆಗಸ್ಟ್ 2025, 5:20 IST
ಕಡರನಾಯ್ಕನಹಳ್ಳಿ ಸಮೀಪದ ಗುಡ್ಡದ ತುಮ್ಮಿನಕಟ್ಟಿ ಗ್ರಾಮದ ಜಮೀನಿನಲ್ಲಿ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಸಿಂಪಡಣೆಯ ಪ್ರಾತ್ಯಕ್ಷಿಕೆ ನಡೆಯಿತು
ಕಡರನಾಯ್ಕನಹಳ್ಳಿ ಸಮೀಪದ ಗುಡ್ಡದ ತುಮ್ಮಿನಕಟ್ಟಿ ಗ್ರಾಮದ ಜಮೀನಿನಲ್ಲಿ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಸಿಂಪಡಣೆಯ ಪ್ರಾತ್ಯಕ್ಷಿಕೆ ನಡೆಯಿತು   

ಕಡರನಾಯ್ಕನಹಳ್ಳಿ: ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ರೈತರಿಗೆ ಲಾಭದಾಯಕ. ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೊ ಯೂರಿಯಾ ಬಳಸುವುದರಿಂದ ಹೆಚ್ಚಿನ ಇಳುವರಿ ಸಾಧ್ಯ ಎಂದು ಕೃಷಿ ಅಧಿಕಾರಿ ಎನ್. ವಿಕಾಸ್ ತಿಳಿಸಿದರು.

ಸಮೀಪದ ಗುಡ್ಡದ ತಿಮ್ಮಿನಕಟ್ಟಿ ಗ್ರಾಮದ ರೈತರ ಆಂಜಿನಪ್ಪ ಅವರ ಜಮೀನಿನಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆಯ ವೇಳೆ ಮಾತನಾಡಿದರು.

ನ್ಯಾನೊ ಯೂರಿಯಾವನ್ನು ಮೇಲು ಗೊಬ್ಬರವಾಗಿ ನೀಡುವುದು ಪರಿಣಾಮಕಾರಿ. ಉತ್ಪಾದನೆಯ ವೆಚ್ಚ ಕಡಿಮೆಯಾಗಿದ್ದು, ಆದಾಯವೂ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ADVERTISEMENT

ಡ್ರೋನ್ ಮೂಲಕ ಗೊಬ್ಬರ ಸಿಂಪಡಣೆಯನ್ನು ಗ್ರಾಮಸ್ಥರು ಕುತೂಹಲದಿಂದ ವೀಕ್ಷಿಸಿದರು. ಕೃಷಿ ಇಲಾಖೆಯ ಸಿಬ್ಬಂದಿ ಎಂ.ವಿ. ರಾಕೇಶ್, ಜಿ.ಆರ್. ಆನಂದರಾಜ್, ಗಣೇಶ್, ರೈತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.