ADVERTISEMENT

ಕರ್ತವ್ಯಲೋಪ: ನಗರಸಭೆ ಬಿಲ್ ಕಲೆಕ್ಟರ್ ಅಣ್ಣಪ್ಪ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 6:30 IST
Last Updated 17 ಆಗಸ್ಟ್ 2025, 6:30 IST
ಅಣ್ಣಪ್ಪ ಟಿ.
ಅಣ್ಣಪ್ಪ ಟಿ.   

ಹರಿಹರ: ಬಿ–ಖಾತಾ ನೀಡುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ನಗರಸಭೆ ಬಿಲ್ ಕಲೆಕ್ಟರ್ (ಕರವಸೂಲಿಗಾರ) ಅಣ್ಣಪ್ಪ ಟಿ. ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಫೆ.17ರಿಂದ ಆರಂಭವಾಗಿದ್ದ ಅಭಿಯಾನದಡಿ, ಈವರೆಗೆ ಅಣ್ಣಪ್ಪ 764 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ್ದಾರೆ. ಈ ಪೈಕಿ 120 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, 644 ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವುದು ತನಿಖೆಯಿಂದ ಪತ್ತೆಯಾಗಿದೆ.

ಈ ಹಿಂದೆ ಅಣ್ಣಪ್ಪ ಅವರಿಗೆ ಗೂಗಲ್ ಮೀಟ್‌ನಲ್ಲಿ ಹಲವು ಬಾರಿ ಹಾಗೂ ಎರಡು ಬಾರಿ ಕಾರಣ ಕೇಳಿ ನೋಟಿಸ್ ನೀಡಿ ಎಚ್ಚರಿಸಲಾಗಿದೆ.  ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ತಾಕೀತು ಮಾಡಲಾಗಿತ್ತು. ಅನುಮತಿ ಇಲ್ಲದೆ ರಜೆಯ ಮೇಲೆ ತೆರಳಿದ್ದರು. 

ADVERTISEMENT

ನಗರಸಭೆಯ ಕಂದಾಯ ಶಾಖೆಯ ಅಧಿಕಾರಿಗಳ ವರದಿ ಹಾಗೂ ಪರಿಶೀಲನೆ ವೇಳೆ ಕಂಡುಬಂದ ಅಂಶಗಳನ್ನು ಪರಿಗಣಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.