
ಹರಿಹರ: ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ರಸ್ತೆ, ಚರಂಡಿ, ಕಿರು ನೀರು ಸರಬರಾಜು ಕೇಂದ್ರ ಸೇರಿದಂತೆ ಯಾವುದೇ ಕಾಮಗಾರಿಗಳಿದ್ದರೂ ಅರ್ಧಕ್ಕೆ ನಿಲ್ಲಿಸುವುದು, ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದರು.
ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಪಬ್ಲಿಕ್ ಶಾಲೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕೇಂದ್ರ, ಆಂಜನೇಯ ಸಮುದಾಯ ಭವನ ಹಾಗೂ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ನಾರಪ್ಪ, ತಾಲ್ಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಎಚ್.ಆರ್., ನರೇಗಾ ಎಂಜಿನಿಯರ್ ರಂಗನಾಥ್, ಶ್ರೀನಿವಾಸ್ ಬಾಬು, ಗ್ರಾಮದ ಮುಖಂಡರಾದ ಗೌಡರ ಪ್ರಸನ್ನ, ದೇವರಾಜ್ ತೋಟಿಗರ, ಮುದೇಗೌಡರ ಪರಮೇಶ್ವರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.