ಹರಿಹರ: ‘ತಾಲ್ಲೂಕಿನ ಮೆಕ್ಕೆಜೋಳದ ಬೆಳೆಯಲ್ಲಿ ಬೆಳೆದಿರುವ ಮುಳ್ಳುಸಜ್ಜೆ ಕಳೆಯನ್ನು ಎಡೆಕುಂಟೆ ಹೊಡೆದು ನಿಯಂತ್ರಿಸಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ನಟರಾಜ್ ರೈತರಿಗೆ ಸಲಹೆ ನೀಡಿದ್ದಾರೆ.
ತಾಲ್ಲೂಕಿನಲ್ಲಿ ಒಟ್ಟು 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯನ್ನು ಬೆಳೆದಿದ್ದು 30ರಿಂದ 45 ದಿನದ ಬೆಳವಣಿಗೆ ಹಂತದಲ್ಲಿದೆ. ಹೊಸಳ್ಳಿ ಹಾಗೂ ಬಿಳಸನೂರು ಹಾಗೂ ಸುತ್ತಲಿನ ಪ್ರದೇಶದಲ್ಲಿ ಮುಳ್ಳುಸಜ್ಜೆ ಕಳೆ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷ ಮೆಕ್ಕೆಜೋಳ ಬೆಳೆಯುವುದರಿಂದ ಈ ಸಮಸ್ಯೆ ಎದುರಾಗಿದೆ, ಸೂರ್ಯಕಾಂತಿ, ಸಜ್ಜೆ, ರಾಗಿ ಬೆಳೆಯುವ ಮೂಲಕ ಬೆಳೆ ಪರಿವರ್ತನೆ ಮಾಡಿದರೆ ಕಳೆಯ ಕಾಟ ನಿವಾರಣೆಯಾಗಲಿದೆ ಎಂದು ಅವರು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.