ADVERTISEMENT

ಹರಿಹರ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನರು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 5:18 IST
Last Updated 26 ಏಪ್ರಿಲ್ 2021, 5:18 IST
ಹರಿಹರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಭಾನುವಾರ ಬೆಳಿಗ್ಗೆ ತರಕಾರಿ ಖರೀದಿಗೆ ಮುಗಿಬಿದ್ದಿದ್ದ ಸಾರ್ವಜನಿಕರು.
ಹರಿಹರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಭಾನುವಾರ ಬೆಳಿಗ್ಗೆ ತರಕಾರಿ ಖರೀದಿಗೆ ಮುಗಿಬಿದ್ದಿದ್ದ ಸಾರ್ವಜನಿಕರು.   

ಹರಿಹರ:ವಾರಂತ್ಯ ಕರ್ಫ್ಯೂವಿನ ಎರಡನೇ ದಿನವಾದ ಭಾನುವಾರ ನಗರದಲ್ಲಿ ಬೆಳಿಗ್ಗೆ 8ರಿಂದ 10ರ ವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಲಾಕ್‍ಡೌನ್‍ ಮುಂದುವರಿಯುವ ವದಂತಿ ಹಾಗೂ ಸಮಯದ ಅಭಾವದಿಂದ ಜನ ತರಕಾರಿ ಹಾಗೂ ದಿನಸಿ ಖರೀದಿಗೆ ಮುಗುಬಿದ್ದರು.

ಅಧಿಕಾರಿಗಳು ಅನೇಕ ಬಾರಿ ಎಚ್ಚರಿಸಿದರೂ ಸಾರ್ವಜನಿಕರು ಖರೀದಿಯಲ್ಲಿ ತೊಡಗಿದ್ದರು.

ಬೆಳಿಗ್ಗೆ 10ರ ನಂತರ ನಗರಸಭೆ, ಕಂದಾಯ ಹಾಗೂ ಪೊಲೀಸ್‍ ಸಿಬ್ಬಂದಿ ತರಕಾರಿ ಹಾಗೂ ದಿನಸಿ ಅಂಗಡಿಗಳನ್ನು ಬಂದ್‍ ಮಾಡಿಸಿದರು. ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಸಿಪಿಐ ಸತೀಶ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗುವ ಮೂಲಕ ಅನಗತ್ಯವಾಗಿ ತಿರುಗಾಡುವವರಿಗೆ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.