
ದಾವಣಗೆರೆ: ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ– 2025’ ರಚನೆ ಕುರಿತು ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಸೂದೆಯ ಪ್ರತಿಯನ್ನು ಹರಿದುಹಾಕಿದ ಪ್ರಮೋದ್ ಮುತಾಲಿಕ್, ‘ಮಸೂದೆ ಜಾರಿಗೊಳಿಸಿದರೆ ನೀಡಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
‘ಗೋಹತ್ಯೆ ವಿರುದ್ಧ ಧ್ವನಿ ಎತ್ತಬಾರದೇ?, ಲವ್ ಜಿಹಾದ್, ಮತಾಂತರದ ಬಗ್ಗೆ ಮಾತನಾಡಬಾರದೇ? ಇವುಗಳ ಬಗ್ಗೆ ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ದ್ವೇಷ ಭಾಷಣವೇ?’ ಎಂದು ಪ್ರಶ್ನಿಸಿದರು. ಮಸೂದೆ ರಚಿಸಿದ್ದರ ಹಿಂದೆ ಹಿಂದೂ ಸಂಘಟನೆಗಳು, ಹಿಂದೂ ಮುಖಂಡರನ್ನು ಹತ್ತಿಕ್ಕುವ ಷಡ್ಯಂತ್ರವಿದೆ’ ಎಂದು ದೂರಿದರು.
ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ದೊರೆಯದಂತೆ ನೋಡಿಕೊಳ್ಳುವಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ’ ಎಂದರು.
‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಅನ್ನು ಸ್ವಾಗತಿಸುತ್ತೇವೆ. ಜಾತಿ ದ್ವೇಷ, ಅಸ್ಪೃಶ್ಯತೆ, ಬಹಿಷ್ಕಾರಗಳಿಗೆ ಕಡಿವಾಣ ಹಾಕುವ ಇಂತಹ ಮಸೂದೆಗೆ ನಮ್ಮ ಸಹಮತವಿದೆ’ ಎಂದು ಮುತಾಲಿಕ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.