ಮಾಯಕೊಂಡ: ಸಮೀಪದ ಅಣಬೇರು ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ.
ಕುಂಬಾರ ಮಂಜಣ್ಣ ಅವರು 50 ಪೆಂಡೆ ರಾಗಿ ಹುಲ್ಲು, ನೂರು ಪೆಂಡೆ ಭತ್ತದ ಹುಲ್ಲು ಸಂಗ್ರಹಿಸಿದ್ದರು. ಯಾರೋ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂದು ಮಂಜಣ್ಣ ದೂರಿದ್ದಾರೆ.
ರೈತನಿಗೆ ಪರಿಹಾರ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.