ADVERTISEMENT

ಅಪಾಯಕಾರಿ ಪಯಣ: ಆತಂಕ

pv 18 july nmt3 traffic auto

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 8:51 IST
Last Updated 19 ಜುಲೈ 2019, 8:51 IST
ನ್ಯಾಮತಿಯಲ್ಲಿ ಗುರುವಾರ ಆಟೊ ಒಂದರಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳನ್ನು ಕುರಿಗಳಂತೆ ತುಂಬಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣ ಮಾಡುತ್ತಿರುವುದು.
ನ್ಯಾಮತಿಯಲ್ಲಿ ಗುರುವಾರ ಆಟೊ ಒಂದರಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳನ್ನು ಕುರಿಗಳಂತೆ ತುಂಬಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣ ಮಾಡುತ್ತಿರುವುದು.   

ನ್ಯಾಮತಿ: ‘ಸರಕು ಸಾಗಣೆ ವಾಹನ, ಟ್ರ್ಯಾಕ್ಟರ್‌ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು ಅಪರಾಧ ಹಾಗೆಯೇ ಮೂರು ಜನ ಪ್ರಯಾಣಿಸುವ ಆಟೊಗಳಲ್ಲಿ ಹೆಚ್ಚು ಜನರನ್ನು ತುಂಬುವುದು ಕಾನೂನು ಬಾಹಿರ’ ಎಂಬ ಪೊಲೀಸರ ಎಚ್ಚರಿಕೆಯನ್ನು ಗಾಳಿಗೆ ತೂರಿ ಆಟೊಗಳಲ್ಲಿ ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಪಟ್ಟಣದಲ್ಲಿ ಸಾಮಾನ್ಯವಾಗಿದೆ.

ನ್ಯಾಮತಿಯಿಂದ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸೌಕರ್ಯ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ‘ಬೆಳಿಗ್ಗೆ ಮತ್ತು ಸಂಜೆ ಶಾಲೆ-ಕಾಲೇಜು ವಿದ್ಯಾರ್ಥಿಗಳು ಆಟೊಗಳ ಒಳಗೆ ತುಂಬಿಕೊಳ್ಳುವುದಲ್ಲದೇ ಹಿಂಬದಿಯಲ್ಲೂ ಹಿಡಿಕೆಗಳನ್ನು ಹಿಡಿದು ಪ್ರಯಾಣಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಅಪಘಾತವಾಗುವ ಸಂಭವ ಹೆಚ್ಚಿದೆ’ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನು ಉಲ್ಲಂಘಿಸುವ ವಾಹನ ಮಾಲೀಕರು ಮತ್ತು ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಬ್‌ಇನ್‌ಸ್ಪೆಕ್ಟರ್ ಹನುಮಂತಪ್ಪ ಎಂ. ಶಿರಿಹಳ್ಳಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.