ADVERTISEMENT

ಚಿತ್ರದುರ್ಗ ದುರಂತ | ಬಸ್‌ಗಳಿಗೆ ಸುರಕ್ಷತಾ ಮಾರ್ಗಸೂಚಿ ಅಗತ್ಯ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 7:26 IST
Last Updated 25 ಡಿಸೆಂಬರ್ 2025, 7:26 IST
<div class="paragraphs"><p>ಅಪಘಾತದಲ್ಲಿ ಹಾನಿಯಾಗಿರುವ ಕಂಟೈನರ್ (ಒಳ ಚಿತ್ರದಲ್ಲಿ ಎಚ್‌.ಡಿ ಕುಮಾರಸ್ವಾಮಿ)</p></div>

ಅಪಘಾತದಲ್ಲಿ ಹಾನಿಯಾಗಿರುವ ಕಂಟೈನರ್ (ಒಳ ಚಿತ್ರದಲ್ಲಿ ಎಚ್‌.ಡಿ ಕುಮಾರಸ್ವಾಮಿ)

   

– ಪ್ರಜಾವಾಣಿ ಚಿತ್ರಗಳು

ದಾವಣಗೆರೆ: ಸ್ಲೀಪರ್‌ ಕೋಚ್‌ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸಲಹೆ ನೀಡಿದರು.

ADVERTISEMENT

‘ರಾತ್ರಿ ಸಂದರ್ಭದ ಪ್ರಯಾಣ ಅಸುರಕ್ಷಿತ ಎಂಬ ಭಾವನೆ ಮೂಡಿದೆ. ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ನಿರೀಕ್ಷೆ ಮೀರಿದ ಸಾವು–ನೋವು ಉಂಟಾಗುತ್ತಿದೆ. ಸ್ಲೀಪರ್‌ ಕೋಚ್‌ ಬಸ್‌ಗಳಲ್ಲಿ ಅವಘಡ ಸಂಭವಿಸಿದಾಗ ತುರ್ತಾಗಿ ಪಾರಾಗುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಬಸ್‌ ಮಾಲೀಕರೊಂದಿಗೆ ಚರ್ಚಿಸಿ ಮಾರ್ಗಸೂಚಿ ರೂಪಿಸಬೇಕು’ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ಸಂಭವಿಸಿದ ಬಸ್‌ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು ಕರುಣಿಸಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.