ದಾವಣಗೆರೆ: ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳು ಚಿಕ್ಕ ಮಕ್ಕಳಲ್ಲಿಯೂ ಕಾಣಿಸಿಕೊಳ್ಳುತ್ತಿವೆ. ದೈಹಿಕ ಚಟುವಟಿಕೆ ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಅಂಕದಷ್ಟೇ ಆರೋಗ್ಯವೂ ಮುಖ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 14 ಮತ್ತು 17 ವರ್ಷದ ಒಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಪಠ್ಯದ ಜೊತೆಗೆ ಕ್ರೀಡೆಗೂ ಒತ್ತು ನೀಡಬೇಕಿದೆ’ ಎಂದು ಹೇಳಿದರು.
‘ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವವರ ಸಂಖ್ಯೆ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ಸಿಗಲಿದೆ. ಜಿಲ್ಲೆಯ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಗಲಿದೆ’ ಎಂದರು.
ಬಿಇಒ ಪುಷ್ಪಲತಾ, ತಾಲ್ಲೂಕು ದೈಹಿಕ ಪರಿವೀಕ್ಷಕ ವಿಜಯಕುಮಾರ್, ಬಿಆರ್‌ಸಿ ಚೌಡಪ್ಪ, ಡಿ.ಎನ್. ಗಣೇಶ್, ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.