ADVERTISEMENT

ಸಾಸ್ವೆಹಳ್ಳಿ: ‘ಅವಳಿ ತಾಲ್ಲೂಕುಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ’

ಸಾಸ್ವೆಹಳ್ಳಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ.ಜಿ ಶಾಂತನಗೌಡ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 7:56 IST
Last Updated 30 ಆಗಸ್ಟ್ 2025, 7:56 IST
ಸಾಸ್ವೆಹಳ್ಳಿ ಸಮೀಪದ ಹೊಸಹಳ್ಳಿಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಡಿ.ಜಿ ಶಾಂತನಗೌಡ ಉದ್ಘಾಟಿಸಿದರು
ಸಾಸ್ವೆಹಳ್ಳಿ ಸಮೀಪದ ಹೊಸಹಳ್ಳಿಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಡಿ.ಜಿ ಶಾಂತನಗೌಡ ಉದ್ಘಾಟಿಸಿದರು   

ಸಾಸ್ವೆಹಳ್ಳಿ: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಿಗೆ ₹400 ಕೋಟಿಗೂ ಹೆಚ್ಚು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಎಂದು ಹೊನ್ನಾಳಿ ಶಾಸಕ ಡಿ.ಜಿ ಶಾಂತನ ಗೌಡ ಹೇಳಿದರು.

ಸಮೀಪದ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹತ್ತಕ್ಕೂ ಹೆಚ್ಚು ಕಾಮಗಾರಿಗಳನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ರಸ್ತೆ, ಶಾಲಾ ಕೊಠಡಿ ನಿರ್ಮಾಣ, 120ಕ್ಕೂ ಹೆಚ್ಚು ಶಾಲೆಗಳ ದುರಸ್ತಿ, ಭದ್ರಾ ಕಾಲುವೆಯ ಹೂಳು ತೆರವು ಹಾಗೂ ದುರಸ್ತಿಗೆ ₹20 ಕೋಟಿ ಅನುದಾನ, 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳು ಆಗಿವೆ ಎಂದರು.

ADVERTISEMENT

ಸಾಸ್ವೆಹಳ್ಳಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸುವ ಉದ್ದೇಶ ಇದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಕುಡಿಯುವ ನೀರಿನ ಯೋಜನೆ ಪ್ರತಿ ಗ್ರಾಮಕ್ಕೂ ತಲುಪುತ್ತಿದ್ದು, ಹೆಚ್ಚು ಅನುಕೂಲವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. 

ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಅವಳಿ ತಾಲ್ಲೂಕಿನ 19 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್‌ ತಿಳಿಸಿದರು.

ಕಾರ್ಯಪಾಲಕ ಎಂಜಿನಿಯರ್ ಸೋಮ್ಲಾ ನಾಯ್ಕ, ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಎಂ.ಆರ್., ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಭಿಯಂತರ ಡಿ.ಜಿ. ಅಶೋಕ್, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಶಪ್ಪ, ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎ ಗದ್ದಿಗೇಶ್, ಸದಸ್ಯ ಎ.ಅರ್ ಚಂದ್ರಶೇಖರ್, ಜಿ.ಪಂ ಮಾಜಿ ಸದಸ್ಯ ನಾಗಪ್ಪ ಆರ್., ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಸೀನಾ ಜಾನ್, ಉಪಾಧ್ಯಕ್ಷೆ ಗೌರಮ್ಮ ಹಾಗೂ ಸದಸ್ಯರು, ವಿವಿಧ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.