ನಾಗಪ್ಪ
ಮಾಯಕೊಂಡ (ದಾವಣಗೆರೆ): ಹೆಜ್ಜೇನು ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಹುಚ್ಚವ್ವನಹಳ್ಳಿಯ ನಾಗಪ್ಪ (65) ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ. ಬೆಳಿಗ್ಗೆ ಜಮೀನಿಗೆ ತೆರಳುತ್ತಿದ್ದ ಇವರ ಮೇಲೆ ಹೆಜ್ಜೇನು ದಾಳಿ ನಡೆಸಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ರೈತನನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಮಾಯಕೊಂಡ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಶಾಸಕ ಕೆ.ಎಸ್.ಬಸವಂತಪ್ಪ ಆಸ್ಪತ್ರೆಗೆ ಭೇಟಿ ನೀಡಿ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.