
ಪ್ರಜಾವಾಣಿ ವಾರ್ತೆಹೊನ್ನಾಳಿ: ಸಂಸ್ಕಾರವಂತ ವ್ಯಕ್ತಿಯ ಜೀವನ ಸುಖ ಹಾಗೂ ಆರೋಗ್ಯಕರವಾಗಿ ಇರುತ್ತದೆ ಎಂದು ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಪಟ್ಟಣದ ಹಿರೇಕಲ್ಮಠದಲ್ಲಿ ಕಾರ್ತಿಕೋತ್ಸವ, ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಹಾಗೂ ಗುರು ಚನ್ನೇಶ್ವರರ ಬೆಳ್ಳಿ ರಥೋತ್ಸವದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.
ಶಿವಮೊಗ್ಗದ ಆಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎ. ಹಿರೇಮಠ ಅವರು ನಿದ್ದೆಯ ಮಹತ್ವವನ್ನು ವಿವರಿಸಿದರು.
ಜಕ್ಕಿನಕೊಪ್ಪ ಗ್ರಾಮದ ಆಂಜನೇಯಸ್ವಾಮಿ ಕೋಲಾಟ ಸಂಘದವರು ಭಜನೆ ಹಾಗೂ ಕೋಲಾಟ ಪ್ರದರ್ಶನ ಮಾಡಿದರು. ಕೆಪಿಟಿಸಿಎಲ್‌ನ ಉದ್ಯೋಗಿ ಕೀರ್ತನಾ ನೃತ್ಯರೂಪಕ ಪ್ರಸ್ತುತಪಡಿಸಿದರು. ಧನಂಜಯ ಪಾಟೀಲ್ ಭಕ್ತರಿಗೆ ಪ್ರಸಾದ ಸೇವೆ ಸಲ್ಲಿಸಿದರು. ಮಠದ ವ್ಯವಸ್ಥಾಪಕ ಎಂ.ಪಿ.ಎಂ. ಚನ್ನಬಸಯ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.