ಹೊನ್ನಾಳಿ: ತಾಲ್ಲೂಕು ಆಡಳಿತದಿಂದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಉಪವಿಭಾಗಾಧಿಕಾರಿ ನೇತೃತ್ವದ ಸಭೆ ತೀರ್ಮಾನಿಸಿತು.
ಶುಕ್ರವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಉಪವಿಭಾಗಾಧಿಕಾರಿ ವಿ. ಅಭಿಷೇಕ್ ಮಾತನಾಡಿ, ಪತ್ರಕರ್ತರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಮಾಜಿ ಸೈನಿಕರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಅಳವಡಿಸಿಕೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ, ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಪಟ್ಟರಾಜಗೌಡ, ಸಿಪಿಐ ಸುನೀಲ್‌ಕುಮಾರ್, ಪಶು ವೈದ್ಯಾಧಿಕಾರಿ ಡಾ. ವಿಶ್ವನಟೇಶ್, ಬಿಸಿಎಂ ಅಧಿಕಾರಿ ಮೃತ್ಯುಂಜಯಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಲೀಲಾವತಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಜಗದೀಶ್, ಸಬ್ ರಿಜಿಸ್ಟ್ರಾರ್ ನವೀನ್‌ಕುಮಾರ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ, ಸಿಡಿಪಿಒ ಜ್ಯೋತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.