ಹೊನ್ನಾಳಿ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭವಾಗಿದ್ದು, ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ಜಾತಿ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಸೋಮವಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಪಟ್ಟಣದ ದುರ್ಗಿಗುಡಿ ಬಡಾವಣೆಯ 5ನೇ ಅಡ್ಡ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
‘ಕುಟುಂಬದ ಸದಸ್ಯರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯ ಸೇರಿದಂತೆ ಇತರ ಮಾಹಿತಿ ಹಾಗೂ ಆರ್ಥಿಕತೆಗೆ ಸಂಬಂಧಿಸಿದ ಮಾಹಿತಿ, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ, ಭೂಮಿ ಒಡೆತನ, ಮನೆ, ಆದಾಯ ಇತ್ಯಾದಿ ಅಂಶಗಳ ಕುರಿತು ಸಮಗ್ರ ಮಾಹಿತಿಯನ್ನು ಸಮೀಕ್ಷಾದಾರರಿಗೆ ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದರು.
ಉಪವಿಭಾಗಾಧಿಕಾರಿ ವಿ. ಅಭಿಷೇಕ್, ತಹಶೀಲ್ದಾರ್ ಪಟ್ಟರಾಜಗೌಡ, ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ನ್ಯಾಮತಿ ತಾಲ್ಲೂಕು ಪಂಚಾಯಿತಿ ಇಒ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಉಮಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.