ಹೊನ್ನಾಳಿ: ‘ಪ್ರತಿಭಾ ಪುರಸ್ಕಾರ ಸಮಾರಂಭಗಳಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪುರಸ್ಕರಿಸಿದರೆ ಅವರ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ತಂದೆ– ತಾಯಿ ಹೆಸರಿನಲ್ಲಿ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎ.ಉಮಾಪತಿ ಅವರ ತಂದೆ ಹೆಸರಿನಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕೇವಲ ಅಂಕಗಳಿಕೆಗೋಸ್ಕರ ಓದುವುದು ಸರಿಯಲ್ಲ. ಸಂಸ್ಕಾರ ಹಾಗೂ ಮೌಲ್ಯಾಧಾರಿತ ಜೀವನ ನಡೆಸುವುದು, ಸನ್ಮಾರ್ಗದಲ್ಲಿ ಮುನ್ನಡೆದು ಸಮಾಜಮುಖಿ ಬದುಕು ನಡೆಸುವುದು, ನೈತಿಕ ಶಿಕ್ಷಣ ಪಡೆದು ಸತ್ಪ್ರಜೆಯನ್ನಾಗಿ ಮಾಡುವುದು ನಿಜವಾದ ಶಿಕ್ಷಣ’ ಎಂದರು.
ಪ್ರಾಂಶುಪಾಲ ಧನಂಜಯ್, ಎಚ್.ಎ. ಉಮಾಪತಿ, ಉಪನ್ಯಾಸಕ ರಾಘವೇಂದ್ರರಾವ್, ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ತೃತೀಯ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಗಗನಾ ಮಾತನಾಡಿದರು.
ಉಪನ್ಯಾಸಕರಾದ ಗೀತಾ, ರಾಘವೇಂದ್ರ, ಹರಾಳು ಮಹಾಬಲೇಶ್, ಅಶೋಕ್, ಗ್ರಂಥಪಾಲಕ ನಾಗರಾಜ್‍ನಾಯ್ಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.